ಎಸ್ಎಸ್ಎಲ್ಸಿ, ಪಿಯುಸಿ, ಪದವೀಧರರಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಜುಲೈ 19 ರಂದು ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದ್ದು, ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಹಾಗೂ ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 30 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read