ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 08 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿರಾಜಪೇಟೆ ಕಲ್ಯಾಣಿ ಮೋಟಾರ್ಸ್, ನೆಕ್ಸಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್, ನೆಕ್ಸಾ, ವಿರಾಜಪೇಟೆ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

