ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲು ಶಿಕ್ಷಣ ಇಲಾಖೆಯಿಂದ 080 23310076, 080 23310075 ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ.
ಇದಕ್ಕೆ ವಿದ್ಯಾರ್ಥಿಗಳು ಕರೆ ಮಾಡಿ, ಪರೀಕ್ಷೆ ಬಗೆಗಿನ ಗೊಂದಲ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು.
ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಡೆಯಲಿದ್ದು, ಏಪ್ರಿಲ್ 7ರಂದು ಫಲಿತಾಂಶ ಪ್ರಕಟಿಸಲಾಗುವುದು.
ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆಯಲಿದ್ದು, ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು.
ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಪರೀಕ್ಷೆಗೆ ಮೊದಲೇ ಫಲಿತಾಂಶ ದಿನಾಂಕ ಘೋಷಣೆ ಮಾಡಿದೆ.
ಮಂಡಳಿಯ ಜಾಲತಾಣದಲ್ಲಿನ Student Corner ಅಡಿಯಲ್ಲಿ ಪರೀಕ್ಷೆಗೆ ತಯಾರು Blueprint, Model Question Papers, Exhaustive Question Bank, Previous year Question Papers along with Key answers and centum papers ಗಳನ್ನು ಲಭ್ಯಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

