HomeKarnatakaBIG NEWS : ರಾಜ್ಯ ಸರ್ಕಾರದಿಂದ 'ST' ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 'ವಿದ್ಯಾರ್ಥಿ...

BIG NEWS : ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್ಸೈಟ್ https://ssp.karnataka.gov.in ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು(ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ (ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನೋಪೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸ್ನ ಶುಲ್ಕ ರಶೀದಿ ಪ್ರತಿ ಹಾಗೂ ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಮತ್ತು ಆದಾಯ ಪ್ರಮಾಣ ಪತ್ರ(ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ (1 ರಿಂದ 8ನೇ ತರಗತಿ) ಆದಾಯದ ಮಿತಿ 6 ಲಕ್ಷ ಹಾಗೂ 9ನೇ, 10ನೇ ತರಗತಿ ಆದಾಯದ ಮಿತಿ ರೂ.2.50 ಲಕ್ಷ). ಆದಾರ್ ಕಾರ್ಡ್(ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು (ಆದಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ(ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಮತ್ತು ಎಸ್ಟಿಎಸ್ ಸಂಖ್ಯೆ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ತಂದೆ, ತಾಯಿ, ಪೋಷಕರ ಆಧಾರ್ ಕಾರ್ಡ್ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ. 948084355 ನ್ನು ಸಂಪರ್ಕಿಸಬಹುದು. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತು ಷರತ್ತುಗಳನ್ನು ಚೆನ್ನಾಗಿ ಓದಿಕೊಂಡು ಅರ್ಥೈಸಿಕೊಂಡು ಜಾಗರೂಕತೆಯಿಂದ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular