HomeKarnatakaರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಭರ್ಜರಿ ಸಿಹಿಸುದ್ದಿ : ಶೀಘ್ರವೇ ವೇತನ ಹೆಚ್ಚಳ!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಭರ್ಜರಿ ಸಿಹಿಸುದ್ದಿ : ಶೀಘ್ರವೇ ವೇತನ ಹೆಚ್ಚಳ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸುವ ಸಂಬಂಧ ರಚಿಸಲಾದ 7 ನೇ ವೇತನ ಆಯೋಗ ಸಲ್ಲಿಸಿರುವ ಶಿಫಾರಸುಗಳನ್ನು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬೆಳಕಿನಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

7 ನೇ ವೇತನ ಆಯೋಗದ ವರದಿ ನೀಡಲು 6 ತಿಂಗಳ ಹೆಚ್ಚಿನ ಕಾಲಾವಕಾಶ ಕೇಳಿದ್ದು, ಅಂತಿಮ ವರದಿ ಬಂದಬಳಿಕ ಪರಿಶೀಲಿಸಿ ರಾಜ್ಯದ ಆರ್ಥಿಕ ಸ್ಥಿತಿ ನೋಡಿಕೊಂಡು ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular