ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ʻಹಳೆ ಪಿಂಚಣಿʼ ಮರು ಜಾರಿಗೆ ಸಮಿತಿ ರಚನೆ

ಬೆಂಗಳೂರು : ಹಳೆಯ ಪಿಂಚಣಿ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡಿರುವ ರಾಜ್ಯಗಳಲ್ಲಿ ಯೋಜನೆ ಅನುಷ್ಠಾನಗೊಳಿಸಿರುವ ಕುರಿತು ಕ್ರಮಗಲ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ  ಎಂದು ಹೇಳಿದ್ದಾರೆ.

ರಾಜ್ಯ ದಲ್ಲಿ 5,09,384 ಸರ್ಕಾರಿ  ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಗೆ 2,41,260 ನೌಕರರು ಒಳಪಟ್ಟಿ ದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ 2,68,124 ನೌಕರರು ಒಳಪಟ್ಟಿದ್ದಾರೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read