
ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ:01/01/2023 ರಿಂದ ದಿನಾಂಕ:31/03/2023 ರವರೆಗಿನ ಅವಧಿಗೆ ವಾರ್ಷಿಕ ಶೇ.7.1 ಕ್ಕೆ ನಿಗದಿಪಡಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ ಧಾಯಪುಲೆ ಆದೇಶ ಹೊರಡಿಸಿದ್ದಾರೆ.


