ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಕಾಲ ಸಡಿಲಿಕೆ ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಒಂದು ಬಾರಿಯ ವಿಶೇಷ ಕ್ರಮ : ಕೋವಿಡ್ ಅಥವಾ ಇತರ ಕಾರಣಗಳಿಂದ ನೇಮಕಾತಿ ವಿಳಂಬವಾಗಿ ವಯೋಮಿತಿ ಮೀರಿದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಇದು ಕೇವಲ ಒಂದು ಬಾರಿಯ ಕ್ರಮವಾಗಿದ್ದು (One-time measure), ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಕೊಡುವುದು ಇದರ ಉದ್ದೇಶವಾಗಿದೆ.
ಯಾರಿಗೆ ಅನ್ವಯ ?:
- ದಿನಾಂಕ 31.12.2027 ರವರೆಗೆ ಹೊರಡಿಸಲಾಗುವ ಎಲ್ಲಾ ಹೊಸ ನೇಮಕಾತಿ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.
- ಎಲ್ಲಾ ವರ್ಗದ (General, OBC, SC/ST) ಅಭ್ಯರ್ಥಿಗಳಿಗೆ ಪ್ರಸ್ತುತ ಇರುವ ವಯೋಮಿತಿಗಿಂತ ಹೆಚ್ಚುವರಿಯಾಗಿ 5 ವರ್ಷಗಳ ಕಾಲಾವಕಾಶ ಸಿಗಲಿದೆ.
ಈ ಕುರಿತು ಪೊಲೀಸ್ ಮಹಾನಿರ್ದೇಶಕರು ಮತ್ತು ಐಜಿಪಿ ಕಚೇರಿಯಿಂದ ಈಗಾಗಲೇ ಎಲ್ಲಾ ಘಟಕಾದಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮುಂದಿನ ನೇಮಕಾತಿಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ.


