GOOD NEWS : ರಾಜ್ಯದ ‘ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ‘ಆಹಾರದ ಕಿಟ್’ ನೀಡಲು ಸರ್ಕಾರ ಚಿಂತನೆ.!

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಹೌದು. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ. ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಸದ್ಯದಲ್ಲೇ ಜಾರಿಗೆ ತರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read