ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

2024-25 ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆ ಅಡಿಯಲ್ಲಿ 2023ನೇ ವರ್ಷದಲ್ಲಿ (01-01-2023 ರಿಂದ 31-12-2023) ರ ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

ಕರ್ನಾಟಕವನ್ನು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಡಿಸೆಂಬರ್, 20 ರೊಳಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು ತರಬೇತುದಾರರು 9980887499 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read