HomeKarnatakaರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 'NEET', 'JEE' ಸೇರಿ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ...

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘NEET’, ‘JEE’ ಸೇರಿ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, NEET, JEE ಸೇರಿ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

2024-25 ನೇ ಸಾಲಿನಲ್ಲಿ NEET, JEE (M&A), CLAT, CA Foundation 2 MAT ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಳ ಅರ್ಹತಾ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07.12.2024 ಆಗಿದೆ.

2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿಜಯಪುರ, ದಾವಣಗೆರೆ, ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ NEET ಮತ್ತು JEE (M&A) ಪರೀಕ್ಷಾ ಪೂರ್ವ ತರಬೇತಿಗಳನ್ನು ಹಾಗೂ ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ CLAT, CA Foundation 2 MAT (class room coaching) ನೀಡುತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07.12.2024ರ ಸಂಜೆ 3:00 ಗಂಟೆ ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ 8050770004 ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular