ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದೇಶಿ ವಿದ್ಯಾಭ್ಯಾಸ’ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು http://kmdconline.karnataka.gov.in/ ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ : ಆಗಸ್ಟ್ 31

ಅರ್ಜಿ ಸಲ್ಲಿಸಲು ಅರ್ಹತೆಗಳು

ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಾಗಿರಬೇಕು. ಕೋರ್ಸ್- ಪೂರ್ಣಕಾಲಿಕ ಪದವಿ ಮತ್ತು ಸ್ನಾತಕೋತ್ತರ ಪದವಿ. ವಯಸ್ಸು ಗರಿಷ್ಠ 38 ವರ್ಷ ಮೀರಿರಬಾರದು. ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.8 ಲಕ್ಷ ಮೀರಬಾರದು.

ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು. ನಿಗಮಕ್ಕೆ ಆಸ್ತಿಯ (ಕಟ್ಟಡ, ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು.

ಎಲ್ಲಿ ಅರ್ಜಿ ಸಲ್ಲಿಸಬೇಕು..?

ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಚೇರಿಗೆ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆಟ್ ವಿಜಯನಗರ ಕಾಲೋನಿಯ ನಳಂದ ಕಾಲೇಜ್ ಪಕ್ಕದಲ್ಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮೊ.8277944207 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read