ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ www.ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್ postmartichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read