HomeKarnatakaGOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಸ್ ಪಾಸ್ ಅವಧಿ ವಿಸ್ತರಿಸಿದ...

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬಸ್ ಪಾಸ್ ಅವಧಿ ವಿಸ್ತರಿಸಿದ ‘KSRTC’

ಬೆಂಗಳೂರು : ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗೆ ತೊಂದರೆ ಆಗದಂತೆ ಜೂನ್.30ರವರೆಗೆ ಉಚಿತವಾಗಿ ಸಾರಿಗೆ ಬಸ್ ಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

ಈ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದು, ಶಾಲಾ ಕಾಲೇಜುಗಳು ಜೂನ್-2023ರ ಮಾಹೆಯಲ್ಲಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗೆ ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ , ಕಾಲೇಜು ವಿದ್ಯಾರ್ಥಿಗಳು ಕಳೆದ ಸಾಲಿನ (2022-23) ಬಸ್ ಪಾಸ್ ನೊಂದಿಗೆ ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲಾ / ಕಾಲೇಜುಗಳಿಗೆ ಪಾವತಿಸಿರುವ ರಸೀದಿ ಜೊತೆಗೆ ನಿಗಮದ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ | ಕಾಲೇಜುಗಳಿಗೆ ತೆರಳಲು ಜೂನ್ 30 2023 ರವರೆಗೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಈ ಹಿಂದಿನ ವರ್ಷದ ಪಾಸನ್ನು ಹಾಜರುಪಡಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular