ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾರ್ಮಿಕ ಸಾರಿಗೆ ವಲಯʼ ಸ್ಥಾಪನೆ

ಬೆಳಗಾವಿ : ರಾಜ್ಯ ಸರ್ಕಾರವು ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲೇ ಕಾರ್ಮಿಕ ಸಾರಿಗೆ ವಲಯನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಸಂತೋಷ್‌ ಲಾಡ್‌, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲೇ ಕಾರ್ಮಿಕ ಸಾರಿಗೆ ವಲಯವನ್ನು ಸ್ಥಾಪಿಸಲಾಗುವುದು. ಚಾಲಕರು, ಕ್ಲೀನರ್‌, ಮೆಕ್ಯಾನಿಕ್‌ಗಳು, ಪಂಕ್ಚರ್‌ ಅಂಗಡಿಗಳಲ್ಲಿ ಕೆಲಸ ಮಾಡುವವರು ಮತ್ತಿತರರು ಇದರ ಲಾಭ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 35 ಲಕ್ಷ ಕಾರ್ಮಿಕರಿದ್ದಾರೆ. ಕಾರ್ಮಿಕ ಸಾರಿಗೆ ವಲಯ ಸ್ಥಾಪನೆ  ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಜೊತೆಗೆ ಸಭೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read