HomeLatest Newsಬೀದಿಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: 50 ಸಾವಿರ ರೂ.ವರೆಗೆ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೀದಿಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: 50 ಸಾವಿರ ರೂ.ವರೆಗೆ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಆತ್ಮ ನಿರ್ಭರ್ ಯೋಜನೆಯಡಿಯಲ್ಲಿ ಕೊಪ್ಪಳ ನಗರದ ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯದಡಿಯಲ್ಲಿ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಒದಗಿಸಲು ಕೊಪ್ಪಳ ನಗರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ ಸೌಲಭ್ಯದಡಿಯಲ್ಲಿ ಬ್ಯಾಂಕಿನ ಮೂಲಕ ಮೊದಲನೇ ಹಂತದಲ್ಲಿ ರೂ.15,000(ಸಾಲದ ಅವಧಿ 12 ತಿಂಗಳು), ಎರಡನೇ ಹಂತದಲ್ಲಿ ರೂ.25,000(ಸಾಲದ ಅವಧಿ 18 ತಿಂಗಳು) ಮತ್ತು ಮೂರನೇ ಹಂತದಲ್ಲಿ ರೂ.50,000(ಸಾಲದ ಅವಧಿ 36 ತಿಂಗಳು) ಈ ರೀತಿಯಾಗಿ ಹಂತವಾರು ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯಗಳು ದೊರೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಅವಧಿಯಲ್ಲಿ ಕೊಪ್ಪಳ ನಗರಸಭೆಯ ಡೇ-ನಲ್ಮ್ ವಿಭಾಗದ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular