HomeKarnataka'SSLC' ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ 'KSRTC' ಬಸ್ ವ್ಯವಸ್ಥೆ

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘KSRTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 ರಿಂದ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕ.ರಾ.ರ.ಸಾ.ನಿಗಮ ಅನುಮತಿ ನೀಡಿದೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್ಎಸ್ಎಲ್ಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 14.06.2024 ರಿಂದ 22.06.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್ಎಸ್ಎಲ್ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು.ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ಸುತ್ತೋಲೆ ಹೊರಡಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular