HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಸಾಲ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಸಾಲ ಯೋಜನೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 3 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್/ಡಿ.ಸಿ.ಇ.ಟಿ/ ಪಿ.ಜಿ. ಸಿ.ಇ.ಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (MBBS, MD, MS), ದಂತ ವೈದ್ಯಕೀಯ (BDS, MDS), ಆಯುಷ್(B.Ayush, M.Ayush), ಇಂಜಿನೀಯರಿAಗ್ & ಟೆಕ್ನಾಲಜಿ (B.E/ B.Tech/ M.E/ M.Tech), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (B.Arch/ M.Arch) MBA, MCA, LLB,, B.Sc in Horticulture, Agricultural Engg, Dairy Technology, Forestry, Veternary and Animal Sciences, Fisheries, Sericulture. Home/ Community Sciences, Food Nutrition and Dietetics, B.Pharma, M.Pharma, Pharma.D, And D.Pharma ಗಳಲ್ಲಿ ಆಯ್ಕೆಯಾದಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 3 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಸದ್ಯ ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 3 ರವರೆಗೆ ವಿಸ್ತರಿಸಲಾಗಿದೆ.  ಅರ್ಜಿಗಳನ್ನು ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12 ರಷ್ಟನ್ನು ಪಾವತಿಸಬೇಕಾಗಿರುತ್ತದೆ.(ಶೇ.12 ರಷ್ಟು ಮೊತ್ತವನ್ನು ಆನ್‌ಲೈನ್ ಮುಖಾಂತರ ಪಾವತಿಸಬಹುದು.)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ವೆಬ್ ಸೈಟ್:  www.kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬೇಕೆಂದು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ ಭವನ, ಹೊಸಪೇಟೆ ರಸ್ತೆ ಕೊಪ್ಪಳ–583231, ದೂರವಾಣಿ ಸಂಖ್ಯೆ; 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular