ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹದ ಹವ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆಯಿಂದ ಕೇಂದ್ರ ಸರ್ಕಾರದ ದೀನ್ ದಯಾಳ್ ಸ್ಪರ್ಶ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಯೋಜನೆಯು 6ನೇ ತರಗತಿಯಿಂದ 9ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ. 2025-26 ರ ಶೈಕ್ಷಣಿಕ ವರ್ಷಕ್ಕೆ ಒಟ್ಟು 60 ವಿದ್ಯಾರ್ಥಿಗಳಿಗೆ ತಲಾ 6,000 ರೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳ ಆಯ್ಕೆಯು ಅಂಚೆ ಚೀಟಿ ಸಂಗ್ರಹದ ಕುರಿತು ನಡೆಯುವ ಸ್ಪರ್ಧೆ ಮತ್ತು ಸಂದರ್ಶನದ ಆಧಾರದ ಮೇಲೆ ಇರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಛೇರಿ ಅಥವಾ ವಿಭಾಗೀಯ ಅಂಚೆ ಕಛೇರಿ, ಕೊಪ್ಪಳ ವಿಭಾಗ ಇವರನ್ನು ಸಂಪರ್ಕಿಸಬಹುದು, ದೂರವಾಣಿ ಸಂಖ್ಯೆ: 9060385616 ಗೆ ಕರೆ ಮಾಡಬಹುದು ಅಥವಾ www.indiapost.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಅಂಚೆ ಚೀಟಿ ಸಂಗ್ರಹದ ಹವ್ಯಾಸದೊಂದಿಗೆ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿವೇತನ ಪಡೆಯುವಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೊಪ್ಪಳ ವಿಭಾಗದ ಅಂಚೆ ಅಧೀಕ್ಷಕ ಶಿವಾನಂದ ಬಿ. ರಬಕವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.