HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ 6 ಸಾವಿರ ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ 6 ಸಾವಿರ ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ

ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹದ ಹವ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆಯಿಂದ ಕೇಂದ್ರ ಸರ್ಕಾರದ ದೀನ್ ದಯಾಳ್ ಸ್ಪರ್ಶ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 

ಈ ಯೋಜನೆಯು 6ನೇ ತರಗತಿಯಿಂದ 9ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತದೆ. 2025-26 ರ ಶೈಕ್ಷಣಿಕ ವರ್ಷಕ್ಕೆ ಒಟ್ಟು 60 ವಿದ್ಯಾರ್ಥಿಗಳಿಗೆ ತಲಾ 6,000 ರೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳ ಆಯ್ಕೆಯು ಅಂಚೆ ಚೀಟಿ ಸಂಗ್ರಹದ ಕುರಿತು ನಡೆಯುವ ಸ್ಪರ್ಧೆ ಮತ್ತು ಸಂದರ್ಶನದ ಆಧಾರದ ಮೇಲೆ ಇರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಛೇರಿ ಅಥವಾ ವಿಭಾಗೀಯ ಅಂಚೆ ಕಛೇರಿ, ಕೊಪ್ಪಳ ವಿಭಾಗ ಇವರನ್ನು ಸಂಪರ್ಕಿಸಬಹುದು, ದೂರವಾಣಿ ಸಂಖ್ಯೆ: 9060385616 ಗೆ ಕರೆ ಮಾಡಬಹುದು ಅಥವಾ www.indiapost.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಚೆ ಚೀಟಿ ಸಂಗ್ರಹದ ಹವ್ಯಾಸದೊಂದಿಗೆ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿವೇತನ ಪಡೆಯುವಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೊಪ್ಪಳ ವಿಭಾಗದ ಅಂಚೆ ಅಧೀಕ್ಷಕ ಶಿವಾನಂದ ಬಿ. ರಬಕವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular