ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ ಶಿಪ್ ಗೆ ಅರ್ಜಿ

ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ 2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಉನ್ನತ ದರ್ಜೆ ಶಿಕ್ಷಣದ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಿಕಲಚೇತನ ವಿದ್ಯಾರ್ಥಿಗಳಿಗೆ ಆಗಸ್ಟ್ 31, ಮೆಟ್ರಿಕ್ ನಂತರ ಮತ್ತು ಉನ್ನತ ದರ್ಜೆಯ ಶಿಕ್ಷಣದ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾಪಂ ವಿಆರ್‌ಡಬ್ಲ್ಯೂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಯುಆರ್‌ಡಬ್ಲ್ಯೂ ಮತ್ತು ತಾಪಂ ಎಂಆರ್‌ಡಬ್ಯಲ್ಯೂ ಇವರಿಗೆ ಸಲ್ಲಿಸಬೇಕು.

ಮಾಹಿತಿಗಾಗಿ ಆಯಾ ತಾಲ್ಲೂಕುಗಳ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮೊ: ಬಳ್ಳಾರಿ-8880875620,    ಸಿರುಗುಪ್ಪ-9743509698, ಸಂಡೂರು-9632052270, ಕುರುಗೋಡು-9538000887 ಇವರನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read