ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ “ಅರಿವು ವಿದ್ಯಾಭ್ಯಾಸ ಯೋಜನೆಯಡಿ” ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2025-26 ನೇ ಸಾಲಿಗೆ CET/NEET ಮುಖೇನ ಆಯ್ಕೆಯಾಗುವ, ವೈದ್ಯಕೀಯ(ಎಂ.ಬಿ.ಬಿ.ಎಸ್) ಬಿಡಿಎಸ್, ಬಿ.ಇ/ಬಿ.ಟೆಕ್ ಬ್ಯಾಚುರಲ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಇಂತಹ ಕೋರ್ಸ್ಗಳಿಗೆ ಸಾಲವನ್ನು ಪಡೆಯಲು ವೆಬ್‌ಸೈಟ್ kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 31-05-2025 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, 1 ನೇ ಮಹಡಿ, ಸಾಲಗಾಮೆ ಮುಖ್ಯ ರಸ್ತೆ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಶ್ರೀ ವಿದ್ಯಾ ಗಣಪತಿ ದೇವಸ್ಥಾನ ಅಡ್ಡ ರಸ್ತೆ, ಮಲ್ನಾಡ್ ಇಂಜಿನಿಯರಿಂಗ್ ಕಾಲೇಜ್ ಹತ್ತಿರ, ಹಾಸನ. ದೂರವಾಣಿ ಸಂಖ್ಯೆ- 08172-246333 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.