HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಸಾಲ ಯೋಜನೆಗೆ ಅವಧಿ ವಿಸ್ತರಣೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಸಾಲ ಯೋಜನೆಗೆ ಅವಧಿ ವಿಸ್ತರಣೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ “ಅರಿವು ವಿದ್ಯಾಭ್ಯಾಸ ಯೋಜನೆಯಡಿ” ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2025-26 ನೇ ಸಾಲಿಗೆ CET/NEET ಮುಖೇನ ಆಯ್ಕೆಯಾಗುವ, ವೈದ್ಯಕೀಯ(ಎಂ.ಬಿ.ಬಿ.ಎಸ್) ಬಿಡಿಎಸ್, ಬಿ.ಇ/ಬಿ.ಟೆಕ್ ಬ್ಯಾಚುರಲ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಇಂತಹ ಕೋರ್ಸ್ಗಳಿಗೆ ಸಾಲವನ್ನು ಪಡೆಯಲು ವೆಬ್‌ಸೈಟ್ kmdconline.karnataka.gov.in  ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ 31-05-2025 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, 1 ನೇ ಮಹಡಿ, ಸಾಲಗಾಮೆ ಮುಖ್ಯ ರಸ್ತೆ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಶ್ರೀ ವಿದ್ಯಾ ಗಣಪತಿ ದೇವಸ್ಥಾನ ಅಡ್ಡ ರಸ್ತೆ, ಮಲ್ನಾಡ್ ಇಂಜಿನಿಯರಿಂಗ್ ಕಾಲೇಜ್ ಹತ್ತಿರ, ಹಾಸನ. ದೂರವಾಣಿ ಸಂಖ್ಯೆ- 08172-246333 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular