ಬೆಂಗಳೂರು: ಸರ್ಕಾರದ ನಿರ್ದೇಶನದಂತೆ ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ಪಾಸ್ ಗಳನ್ನು ವಿತರಿಸಲಿದೆ.
ಮೇ 26ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಲಿದ್ದು, ಜೂನ್ 1ದರಿಂದ ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸ್ ಗಳನ್ನು ವಿತರಿಸಲಾಗುವುದು. ಸೇವಾ ಸಿಂಧು ಪೋರ್ಟಲ್ ನಲ್ಲಿ(https://sevasindhu.karnataka.in) ಆನ್ಲೈನ್ ಅರ್ಜಿ ಲಭ್ಯವಿರುತ್ತದೆ.
ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ವಿದ್ಯಾರ್ಥಿ ಪಾಸ್ ಗೆ ಅರ್ಜಿ ಸಲ್ಲಿಸಬಹುದು. ಬಿಎಂಟಿಸಿ ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ 19, ಶಾಂತಿನಗರ ಟಿಟಿಎಂಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ಪಾಸ್ ಗಳನ್ನು ವಿತರಿಸಲಾಗುವುದು.
ಶಕ್ತಿ ಯೋಜನೆಯಡಿ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.