HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: LKG, UKG, ಪಿಯುಸಿ ಮಕ್ಕಳಿಗೂ ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: LKG, UKG, ಪಿಯುಸಿ ಮಕ್ಕಳಿಗೂ ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣೆ

ಬೆಂಗಳೂರು: ಎಲ್.ಕೆ.ಜಿ., ಯುಕೆಜಿ, ಪಿಯುಸಿ ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು, ಎಲ್.ಕೆ.ಜಿ., ಯುಕೆಜಿ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು. ಈಗಾಗಲೇ ಒಂದರಿಂದ 10ನೇ ತರಗತಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಉಚಿತ ನೋಟ್ ಪುಸ್ತಕಗಳನ್ನು ನೀಡಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫಲಿತಾಂಶ ಹೆಚ್ಚಳಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಮಾರ್ಗದರ್ಶನ ನೀಡಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನೀಡಲಾಗಿದ್ದು, ಅವುಗಳಿಗೆ ಉತ್ತರ ಕಲಿತುಕೊಂಡರೆ ಬಹುತೇಕ ಪ್ರಶ್ನೆಗಳು ಅವುಗಳಿಂದಲೇ ಬರಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular