HomeLatest News1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರದಲ್ಲಿ 5 ದಿನ ರಾಗಿ ಮಾಲ್ಟ್...

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆಸ ಸಂಪುಟ ಸಭೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದಲ್ಲಿ 3 ದಿನ ವಿತರಣೆ ಮಾಡುತ್ತಿರುವ ರಾಗಿ ಮಾಲ್ಟ್ ಅನ್ನು ವಾರದಲ್ಲಿ 5 ದಿನ ವಿತರಣೆಗೆ ನಿರ್ಧಾರ ಮತ್ತು ಇದರ ಶೇ.25 ವೆಚ್ಚವಾದ ₹27 ಕೋಟಿಯನ್ನು ಭರಿಸಲು ತೀರ್ಮಾನಿಸಲಾಗಿದೆ.

ಬೆ೦ಗಳೂರು ನಗರದ ವಿವಿಧ ಸ್ಥಳಗಳಲ್ಲಿ ಹೊಸದಾಗಿ 6 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ಮಾಣ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ತಗಲುವ ₹956.67 ಕೋಟಿ ವೆಚ್ಚದ ವಿಸ್ತ್ರತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ ಜಿಲ್ಲೆಯ ಸಿಂದಗಿ ಪುರಸಭೆಯನ್ನು, ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ಹಾಗೂ ಬೀದ‌ರ್ ಜಿಲ್ಲೆಯ ಹೂಮ್ನಾಬಾದ್‌ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ 22 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳಲ್ಲಿನ ಅತಿ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿಪಡಿಸಲು ಕ398 ಕೋಟಿ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆ೦ಗಳೂರು ನಗರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಸ್ವಂತ ಕಟ್ಟಡ “ಧಾರ್ಮಿಕ ಸೌಧ’ವನ್ನು ₹27.70 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಕಾಮಗಾರಿಗಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಗತ್ಯವಿರುವ 271 ಎಕರೆ ಜಮೀನನ್ನು ₹77.35 ಕೋಟಿ ವೆಚ್ಚದಲ್ಲಿ ಖರೀದಿಸಲು ನಿರ್ಧರಿಸಲಾಗಿದೆ.

ಬೇಡ್ತಿ ನದಿಯಿ೦ದ ನೀರನ್ನು ಎತ್ತಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳನ್ನು ತುಂಬಿಸುವ ₹179.50 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಹಾಗೂ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಯ ಮೂಲಕ ಹಾವೇರಿ ಜಿಲ್ಲೆಯ ಬ್ಯಾಡಗಿ ಮತ್ತು ಹಾನಗಲ್‌ ತಾಲೂಕಿನ 137 ಕೆರೆಗಳನ್ನು ತುಂಬಿಸುವ ₹115.60 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular