ರಾಜ್ಯದ `SC-ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಧಾರವಾಡ  : 2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ., ಕೆ.ಎ.ಎಸ್., ಬ್ಯಾಂಕಿಂಗ್, ಗ್ರೂಪ್-ಸಿ, ಎಸ್.ಎಸ್.ಸಿ., ಆರ್.ಆರ್.ಬಿ. ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಯನ್ನು ನವೆಂಬರ್ 29 ರೊಳಗೆ ಸಲ್ಲಿಸಬೇಕು. ವೆಬ್‍ಸೈಟ್ www.sw.kar.nic.in ಹಾಗೂ ಅಪರ ನಿರ್ದೇಶಕರು, ಸಮಾಜ  ಕಲ್ಯಾಣ ಇಲಾಖೆ, ಧಾರವಾಡ ಜಿಲ್ಲೆ ಹಾಗೂ ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರ ಸಮಾಜ ಕಲ್ಯಾಣ ಇಲಾಖೆ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ರವರನ್ನು ಸಂಪರ್ಕಿಸಬಹುದು.

ಹೆಚ್ಚಿನ  ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:0836-2447201, 9741955541 ಹಾಗೂ ಆಯಾ ತಾಲ್ಲೂಕು ಕಚೇರಿಗಳಿಗೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read