ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಹೊಸ ತಂತ್ರಾಂಶದಲ್ಲಿ ಆನ್‍ಲೈನ್ª ವೈಬ್‍ಸೈಟ್ (https://swdservices.karnataka.gov.in/PrizeMoneyClientApp) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರಿರುವ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೂಚಿಸಿದೆ. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಸಂಬಂಧಪಟ್ಟ ಅರ್ಜಿ ಹಾಗೂ ದಾಖಲಾತಿಗಳನ್ನು ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರಿಂದ ಸಹಿ ಹಾಗೂ ದೃಢೀಕರಿಸಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಚಿತ್ರದುರ್ಗರವರ ಕಛೇರಿಗೆ ಸಲ್ಲಿಸುವುದು.
ಅರ್ಹತೆ/ಪರತ್ತುಗಳು: ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಶೇ.74.99 ರವರೆಗೆ ರೂ.7,000/-ಪ್ರೋತ್ಸಾಹಧನಮಂಜೂರು ಮಾಡಲಾಗುವುದು ಹಾಗೂ ಶೇ.75ಕ್ಕಿಂತ ಹೆಚ್ಚಿನ ಅಂಕಪಡೆದ ವಿದ್ಯಾರ್ಥಿಗಳಿಗೆ ರೂ.15,000/-ಗಳ ಪ್ರೋತ್ಸಾಹಧನ ಪಡೆಯಲು ಅರ್ಹರಿರುವರು. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಆಧಾರ್ ಸೀಡ್ ಆಗಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವಂತಿಲ್ಲ, ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಡಿಬಿಟಿ ಮುಖಾಂತರ ಪ್ರೋತ್ಸಾಹಧನಜಮಾ ಆಗುತ್ತದೆ.
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಎನ್‍ಪಿಸಿಐ ಮಾಡಿಸುವುದು. ಒಂದು ವೇಳೆ ಆಧಾರ್ ಸೀಡ್ ಆಗದಿದ್ದಲ್ಲಿ, ಆಲ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕೊನೆಯ ದಿನಾಂಕ:31.12.2025ರೊಳಗಾಗಿ ಆಧಾರ್ ಸೀಡ್ ಮಾಡಿಸಿ ಅರ್ಜಿ ಸಲ್ಲಿಸುವುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಎಸ್.ಎಸ್.ಎಲ್.ಸಿ ಅಂಕಟ್ಟಿ, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಗಳಿಗೆ ದೃಢೀಕರಿಸಿ ಸಲ್ಲಿಸುವುದು. ವಿದ್ಯಾರ್ಥಿಗಳು ಅಂತಿಮ ವರ್ಷದ ಪಿ.ಯು.ಸಿ/12ನೇ ತರಗತಿ/ಐಟಿಐ ತರಗತಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಉಳಿದ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪಬ್ಲಿಕ್ ಪರೀಕ್ಷೆ ಇದ್ದಲ್ಲಿ ಪ್ರತಿ ವರ್ಷವೂ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಅಂತಿಮವಾಗಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸುಗಳಿಗೆ ಸೆಮಿಸ್ಟರ್ ಪದ್ಧತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾಗಿರಬೇಕು.
ಯಾವುದೇ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ Compartmental/Carry Over System ರಡಿ ಪಾಸಾಗಿದ್ದರೆ ಅಂತಹವರು ಬಹುಮಾನದ ಹಣ ಪಡೆಯಲು ಅರ್ಹರಿರುವುದಿಲ್ಲ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಮೇಲ್ಕಂಡ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಪಡೆಯಲು ಅರ್ಹರಲ್ಲ. ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಯು.ಜಿ.ಸಿಯಿಂದ ಮಾನ್ಯತೆ ಪಡೆದ ಡೀಮ್ಸ್ ವಿಶ್ವವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮೈಸೂರು ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಹರಿರುತ್ತಾರೆ. ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಈ ಯೋಜನೆಗೆ ಅರ್ಹತೆ ಪಡೆದಿರುತ್ತಾರೆ. ಕೆಎಸ್‍ಒಯು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಸಹ ಈ ಯೋಜನೆಗೆ ಅರ್ಹತೆ ಪಡೆದಿರುತ್ತಾರೆ. ಐಟಿಐ ಕೋರ್ಸ್ ಸಂಬಂಧ, ಕಡ್ಡಾಯವಾಗಿ ಎಸ್‍ಎಸ್‍ಎಲ್‍ಸಿ ನಂತರದಲ್ಲಿ ಯಾವುದೇ Year Gap ಇಲ್ಲದೇ 3 ವರ್ಷದ ಐಟಿಐಗೆ ಸೇರಿ, ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಪಿಯುಸಿ ನಂತರದಲ್ಲಿ ಐಟಿಐ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.
Diploma In Polytechnic ಕೋರ್ಸ್ ಸಂಬಂಧ ಎಸ್‍ಎಸ್‍ಎಲ್‍ಸಿ ನಂತರದಲ್ಲಿ ಯಾವುದೇ Year Gap ಇಲ್ಲದೇ 3 ವರ್ಷದ Diploma In Polytechnic ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ನಂತರದಲ್ಲಿ ಪಿ.ಯು.ಸಿ ನಂತರದಲ್ಲಿ Diploma In Polytechnic ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ. ಯಾವುದೇ ವರ್ಷದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ಇನ್ನಿತರೆ ಅನಿಯಂತ್ರಿತ ಕಾರಣಗಳಿಂದಾಗಿ ಪರೀಕ್ಷೆ ರದ್ದುಪಡಿಸಿ ಕೇವಲ ತರಗತಿ ಅಂಕಗಳ ಆಧಾರದ ಮೇಲೆ ಅಂತಿಮ ವರ್ಷದಲ್ಲಿ ತೇರ್ಗಡೆ ಎಂದು ಘೋಷಿಸಿದ್ದರೆ ಅಂತಹ ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕೆ ಅರ್ಹತೆ ಪಡೆದಿರುವುದಿಲ್ಲ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಚಿತ್ರದುರ್ಗ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.