HomeKarnatakaರಾಜ್ಯದ 'SC' ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ರಾಜ್ಯದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

2026ನೇ ಸಾಲಿನ ಮಾರ್ಚ್, ಎಪ್ರಿಲ್ ನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅಂತಿಮ ವರ್ಷದ ಪಿ.ಯು.ಸಿ, 12ನೇ, ಐಟಿಐ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಹಾಗೂ ಮೆಟ್ರಿಕ ನಂತರದ ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾಗಿರಬೇಕು.

ಯಾವುದೇ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿcompartmental/carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನದ ಹಣ ಪಡೆಯಲು ಅರ್ಹರಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬೇಕು. ಹಾಗೂ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಗ್ರೇಡ್-1, 2ರವರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular