HomeLatest NewsGOOD NEWS : ರಾಜ್ಯ ಸರ್ಕಾರದಿಂದ 'ST' ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :  ಪ್ರೋತ್ಸಾಹಧನಕ್ಕೆ...

GOOD NEWS : ರಾಜ್ಯ ಸರ್ಕಾರದಿಂದ ‘ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!

ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರೋತ್ಸಾಹಧನ ವಿವರ: ದ್ವಿತೀಯ ಪಿಯುಸಿ ರೂ.20 ಸಾವಿರ, ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30 ಸಾವಿರ ಮತ್ತು ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ.

ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸ್‍ಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ ಕಂಪಾರ್ಟ್‍ಮೆಂಟಲ್/ ಕ್ಯಾರಿ ಓವರ್ ಸಿಸ್ಟಮ್‍ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ರಾಜ್ಯ, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾಸಂಸ್ಥೆಗಳಿಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವುದಿಲ್ಲ.

ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ನೇಟಿವ್ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.

ಆನ್‍ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: ದ್ವಿತೀಯ ಪಿಯುಸಿಗೆ ಅಭ್ಯರ್ಥಿಯ ಭಾವಚಿತ್ರ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಅಭ್ಯರ್ಥಿಯ ಭಾವಚಿತ್ರ, ಎಲ್ಲಾ ಸೆಮ್‍ಗಳ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ.

ವಿದ್ಯಾರ್ಥಿಗಳು www.tw.kar.nic.in ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‍ಫ್ರೀ ದೂ.ಸಂ.080-22634300, 080-22353757 ಅಥವಾ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ದೂ.ಸಂ. 9480843156 ಮತ್ತು 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular