HomeLatest NewsGOOD NEWS : 'ರಾಜ್ಯ ಸರ್ಕಾರ'ದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 'ವಿದ್ಯಾರ್ಥಿ ವೇತನ' ಸೇರಿ...

GOOD NEWS : ‘ರಾಜ್ಯ ಸರ್ಕಾರ’ದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಡಿ.20 2024 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನುಫೆಬ್ರವರಿ15 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ [email protected] ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular