ಬೆಂಗಳೂರು: ಶಾಲಾ ಮಕ್ಕಳ ಆಧಾರ್ ಅಪ್ಡೇಡ್ ಗೆ ಸರ್ಕಾರದಿಂದ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.
ಐದರಿಂದ ಹದಿನೈದು ವರ್ಷದೊಳಗಿನ ಶಾಲಾ ಮಕ್ಕಳ ಆಧಾರ್ ಕಾರ್ಡ್ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ರಾಜ್ಯ ಮತ್ತು ಜಿಲ್ಲಾಮಟ್ಟದ ಸಮಿತಿಯನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳ ಆಧಾರ್ ಮಾಹಿತಿ ಕಾಲಕಾಲಕ್ಕೆ ನವೀಕರಣಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಧಿ, ಪರೀಕ್ಷೆಗೆ ನೋಂದಣಿ ಸೇರಿದಂತೆ ಸರ್ಕಾರದ ಸೌಲಭ್ಯ ಪಡೆಯಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆಧಾರ್ ಅಪ್ಡೇಟ್ ನಡೆಸಲು ಸರ್ಕಾರ ಮುಂದಾಗಿದ್ದು, ವರ್ಷಕ್ಕೆ 20 ಲಕ್ಷ ವಿದ್ಯಾರ್ಥಿಗಳ ಆಧಾರ್ ಅಪ್ಡೇಟ್(ಎಂಬಿಯು) ಮಾಡುವ ಚಿಂತನೆ ಇದೆ.
