HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪಠ್ಯ ಪುಸ್ತಕ ವಿತರಣೆಗೆ ಸರ್ಕಾರ ಆದೇಶ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪಠ್ಯ ಪುಸ್ತಕ ವಿತರಣೆಗೆ ಸರ್ಕಾರ ಆದೇಶ

ಬೆಂಗಳೂರು: 2026 -27ನೇ ಸಾಲಿನ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮೋದನೆ ನೀಡಿದೆ.

1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲು ಅನುಮೋದನೆ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ(ಯೋಜನೆ) ಶುಭಮಂಗಳಾ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕಗಳು, ಸರ್ಕಾರಿ ಶಾಲೆಗಳ 4ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕ ಮತ್ತು ಸರ್ಕಾರಿ ಶಾಲಾ ಕಾಲೇಜುಗಳ ಪೂರ್ವ ಪ್ರಾಥಮಿಕ ತರಗತಿಗಳಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ಮತ್ತು 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ವಿತರಿಸಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಟಿಪಿಪಿ ಕಾಯ್ದೆ 1999ರ ಅಡಿ ರೂಪಿಸಿದ ನಿಯಮಗಳಂತೆ ಪಾರದರ್ಶಕ ಟೆಂಡರ್ ಕರೆದು ಕರ್ನಾಟಕ ಪುಸ್ತಕ ಸಂಘದ ಮೂಲಕ ಮುದ್ರಿಸಿ ವಿತರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ. ಒಟ್ಟು 264.62 ಕೋಟಿ ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆ ಅಡಿ ಪುಸ್ತಕಗಳ ವಿತರಣೆಗೆ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದಡಿ ಹೊಸದಾಗಿ ಅನುಷ್ಠಾನಗೊಳಿಸುವ ಕಾರ್ಯಕ್ರಮಗಳಿಗೆ 25.841 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲೇ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಎಸ್ಎಟಿಎಸ್ ಮೂಲಕ ಶಾಲೆಗಳಿಂದ ಪಠ್ಯಪುಸ್ತಕಗಳ ಬೇಡಿಕೆಯ ಮಾಹಿತಿ ಪಡೆದು ಎಲ್ಲಾ ವಿವರ ದಾಖಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular