HomeLatest NewsBREAKING : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಈ ಜಿಲ್ಲೆಯ ಶಾಲಾ -ಕಾಲೇಜುಗಳಿಗೆ ಇಂದು...

BREAKING : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಈ ಜಿಲ್ಲೆಯ ಶಾಲಾ -ಕಾಲೇಜುಗಳಿಗೆ ಇಂದು ರಜೆ ಘೋಷಣೆ |School Holiday

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಇಂದು ಶಿವಮೊಗ್ಗದ ನಗರದ ಅಂಗನವಾಡಿ, 1ರಿಂದ 10ನೇ ತರಗತಿಯವರೆಗೆ ಹಾಗೂ ಪಿಯುಸಿ ತರಗತಿಗಳಿಗೆ ರಜೆ ನೀಡಲಾಗಿದೆ.

1 ರಿಂದ 10 ನೇ ತರಗತಿಗೆ ರಜೆ ನೀಡಿ ಬಿಇಒ ರಮೇಶ್ ಆದೇಶ ಹೊರಡಿಸಿದ್ದಾರೆ. ಪಿಯುಸಿ ಕಾಲೇಜುಗಳಿಗೆ ರಜೆ ನೀಡಿ ಚಂದ್ರಪ್ಪ ಆದೇಶಿಸಿದ್ದಾರೆ.

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು, ಜನ ಆಗಮಿಸಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಹಿಂದೂ ಮಹಾಸಭಾ ಗಣಪತಿ ಸಾಗುವ ಪ್ರಮುಖ ರಸ್ತೆಗಳು ಸೇರಿದಂತೆ ವಿವಿಧ ರಸ್ತೆಗಳು, ವೃತ್ತಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದೆ.
ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಶನಿವಾರ ನಡೆಯಲಿದ್ದು, ಇಡೀ ನಗರವನ್ನು ಅದ್ದೂರಿಯಾಗಿ ಸಿಂಗರಿಸಲಾಗಿದೆ.
ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ನಗರದ ಪ್ರಮುಖ ವೃತ್ತಗಳು ರಸ್ತೆಗಳನ್ನು ವಿವಿಧ ಕಲಾ ಕೃತಿಗಳ ಮೂಲಕ ಅಲಂಕರಿಸಲಾಗಿದೆ. ಕೇಸರಿ ಬಂಟಿಂಗ್ ಗಳನ್ನು ಕಟ್ಟಲಾಗಿದ್ದು, ಶಿವಮೊಗ್ಗ ನಗರ ಕೇಸರಿಮಯವಾಗಿದೆ.
ಹಿಂದೂ ಮಹಾಸಭಾ ಗಣಪತಿಯ ರಾಜ ಬೀದಿ ಉತ್ಸವಕ್ಕೆ ನಗರ ಮಾತ್ರವಲ್ಲದೇ ವಿವಿಧೆಡೆಯಿಂದ, ಅಪಾರ ಸಂಖ್ಯೆಯ ಜನ ಆಗಮಿಸಲಿದ್ದು, ತಿಂಡಿ, ಪಾನೀಯ ಸಿಹಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಲ್ಲಲ್ಲಿ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಗಾಂಧಿ ಬಜಾರ್ ಮುಂಭಾಗ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನ ಮಹಾದ್ವಾರ ಸ್ಥಾಪಿಸಲಾಗಿದೆ. ದೇವತೆಗಳು ಮತ್ತು ರಾಕ್ಷಸರ ಮಧ್ಯೆ ಅಮೃತಕ್ಕಾಗಿ ಹಾಲಿನ ಸಮುದ್ರವನ್ನು ಸಮುದ್ರ ಮಂಥನ ಕಲಾಕೃತಿ ನೋಡುಗರನ್ನು ಆಕರ್ಷಿಸುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular