HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 35 ಸಾವಿರ ರೂ.ವರೆಗೆ ಪ್ರೋತ್ಸಾಹಧನ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 35 ಸಾವಿರ ರೂ.ವರೆಗೆ ಪ್ರೋತ್ಸಾಹಧನ

ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆದೇಶವಿದೆ.

ಪ್ರೋತ್ಸಾಹಧನದ ವಿವರ:

ಎಸ್‍ಎಸ್‍ಎಲ್‍ಸಿ ಶೇ.60-74.50, 7,500 ರೂ. ಬಹುಮಾನ, ಶೇ.75 ಕ್ಕಿಂತ ಹೆಚ್ಚು ರೂ. 15 ಸಾವಿರ ಬಹುಮಾನ, ದ್ವಿತೀಯ ಪಿಯುಸಿ ರೂ.20 ಸಾವಿರ, ಡಿಗ್ರಿ ರೂ.25 ಸಾವಿರ, ಯಾವುದೇ ಗ್ರಾಜ್ಯುವೇಟ್ ಕೋರ್ಸ್ ಎಂ.ಎ., ಎಂ.ಎಸ್ಸಿ, ರೂ.30 ಸಾವಿರ, ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ ಪ್ರೋತ್ಸಾಹ ನೀಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್‍ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

ಎಸ್‍ಎಸ್‍ಎಲ್‍ಸಿ ತರಗತಿಯವರಿಗೆ ಅಭ್ಯರ್ಥಿಯ ಪೋಟೋ, ಎಸ್‍ಎಸ್ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಸಲ್ಲಿಸಬೇಕು.

 ದ್ವಿತೀಯ ಪಿಯುಸಿ ಯವರಿಗೆ ಅಭ್ಯರ್ಥಿಯ ಫೋಟೊ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಸಲ್ಲಿಸಬೇಕು.

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಅವರಿಗೆ ಅಭ್ಯರ್ಥಿಯ ಫೋಟೋ, ಎಲ್ಲಾ ಸೆಮ್‍ಗಳ ಅಂಕಪಟ್ಟಿ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಸಲ್ಲಿಸಬೇಕು.

ವಿದ್ಯಾರ್ಥಿಗಳು www.sw.kar.nic.in ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‍ಫ್ರೀ ದೂ.ಸಂ.080-22634300, 080-22353757 ಅಥವಾ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ದೂ.ಸಂ. 9480843156 ಮತ್ತು 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular