HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಪುರಸಭೆಯಿಂದ ಲ್ಯಾಪ್‌ಟಾಪ್ ಹಾಗೂ ಸಾಧನ ಸಲಕರಣೆಗಳಿಗೆ ಅರ್ಜಿ ಆಹ್ವಾನ

ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ 2026-27ನೇ ಸಾಲಿನ ಎಸ್‌.ಎಫ್‌.ಸಿ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪುರಸಭೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ವಿಶೇಷ ಚೇತನರಿಗೆ ಸಾಧನ ಸಲಕರಣೆಗಳನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 16ರ ಒಳಗೆ ಕುರೇಕುಪ್ಪ ಪುರಸಭೆ ಕಚೇರಿಗೆ ಸಲ್ಲಿಸಬೇಕಾಗಿದೆ. ನಿಗದಿತ ಅವಧಿಯ ನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಅಗತ್ಯವಿರುವ ದಾಖಲೆಗಳು

ಅರ್ಜಿಯೊಂದಿಗೆ ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ, ಹಿಂದಿನ ವರ್ಷದ ಅಂಕಪಟ್ಟಿ, ಕಾಲೇಜಿನ ಐಡಿ ಕಾರ್ಡ್, ಕಾಲೇಜಿನ ವ್ಯಾಸಂಗ ಪ್ರಮಾಣ ಪತ್ರ, ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ದಾಖಲೆಗಳ ನಕಲು ಪ್ರತಿಗಳನ್ನು (ಅಟೆಸ್ಟೆಡ್)ಲಗತ್ತಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಕುರೇಕುಪ್ಪ ಪುರಸಭೆ ಕಚೇರಿಯ ನೋಟಿಸ್ ಬೋರ್ಡ್ ಗಮನಿಸಬಹುದು ಅಥವಾ ಕಚೇರಿ ವೇಳೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular