ಚಿಕ್ಕಮಗಳೂರು: ಸೂಕ್ತ ಜಾಗದ ವ್ಯವಸ್ಥೆ ಇರುವ ಹಳೆಯ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊಸ ಕೋರ್ಸ್ ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಸುಮಾರು ಎಂಟು ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿದ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ 107 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಮೂರು ಕಾಲೇಜುಗಳಲ್ಲಿ ಕೇವಲ ಒಂದು, 13 ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಎರಡು ಕೋರ್ಸ್ ಗಳು ಮಾತ್ರ ಇವೆ. ಒಂದೇ ಕೋರ್ಸ್ ಗೆ ನೂರಾರು ಕೋಟಿ ವ್ಯಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಂದಿನ ವರ್ಷದಿಂದಲೇ ಒಂದೆರಡು ಕೋರ್ಸ್ ಗಳು ಇರುವ ಪಾಲಿಟೆಕ್ನಿಕ್ ಗಳಲ್ಲಿ ಕನಿಷ್ಠ ನಾಲ್ಕು ಸಮಾನಾಂತರ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಪಾಲಿಟಿಕ್ನಿಕ್ ಕಾಲೇಜ್ ಗಳಲ್ಲಿ ಬೇಡಿಕೆಯ ಅನುಸಾರ ಕೋರ್ಸ್ ಗಳನ್ನು ಪ್ರಾರಂಭಿಸಲು ಸಿದ್ಧತೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
