ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಫೇಲಾಗಿದ್ದರೂ ಸಿಇಟಿ ಬರೆಯುವ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳು ಎರಡು ಮತ್ತು ಮೂರನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶವಿದೆ. ಹೀಗಾಗಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲಹೆ ನೀಡಿದೆ.

ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಇರುವುದು ಸರಿಯಲ್ಲ. ಉಳಿದ ಎರಡು ಪರೀಕ್ಷೆಗಳಲ್ಲಿ ಅಂಕಗಳನ್ನು ಉತ್ತಮಪಡಿಸಿಕೊಳ್ಳಬಹುದು. ಸಿಇಟಿ ಬರೆದರೆ ಮಾತ್ರ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಅರ್ಹರಾದವರಿಗೂ ಸಿಇಟಿ ರ್ಯಾಂಕ್ ನೀಡಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಬಹುದು.

ಕಳೆದ ವರ್ಷ ಅನೇಕರಿಗೆ ರ್ಯಾಂಕ್ ನೀಡಿ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿ 3.3 ಲಕ್ಷ ಅಭ್ಯರ್ಥಿಗಳು ಶುಲ್ಕ ಪಾವತಿಸಿದ್ದು, 2.85 ಲಕ್ಷ ಪ್ರವೇಶ ಪತ್ರಗಳು ಡೌನ್ಲೋಡ್ ಆಗಿವೆ. ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಸಲಹೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read