ಮುಂಬೈ: ನೀತಾ ಅಂಬಾನಿ ಅಧ್ಯಕ್ಷರಾಗಿರುವ ರಿಲಯನ್ಸ್ ಪ್ರತಿಷ್ಠಾನ ವತಿಯಿಂದ ವಾರ್ಷಿಕ ಶಿಷ್ಯವೇತನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2025- 26ನೇ ಶೈಕ್ಷಣಿಕ ವರ್ಷದಲ್ಲಿ ಒಟ್ಟು 5100 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಕ್ಟೋಬರ್ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
5000 ಪದವಿ ವಿದ್ಯಾರ್ಥಿಗಳು ಮತ್ತು 100 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿವರೆಗೆ ಅನುದಾನ ನೀಡಲಾಗುತ್ತದೆ. ಇದು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯನ್ನು ಆಧರಿಸಿರುತ್ತದೆ.
ಸ್ನಾತಕೋತ್ತರ ವಿದ್ಯಾರ್ಥಿವೇತನ ಇಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ವಿಭಾಗಗಳಲ್ಲಿ ಅಧ್ಯಯನ ಮಾಡುವ 100 ವಿದ್ಯಾರ್ಥಿಗಳಿಗೆ 6 ಲಕ್ಷ ನೀಡಲಾಗುವುದು. ಜಾಲತಾಣ scholarships.reliance foundation.org ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.