HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 6 ಲಕ್ಷ ರೂ.ವರೆಗೆ ಶಿಷ್ಯವೇತನಕ್ಕೆ ರಿಲಯನ್ಸ್ ಪ್ರತಿಷ್ಠಾನ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 6 ಲಕ್ಷ ರೂ.ವರೆಗೆ ಶಿಷ್ಯವೇತನಕ್ಕೆ ರಿಲಯನ್ಸ್ ಪ್ರತಿಷ್ಠಾನ ಅರ್ಜಿ ಆಹ್ವಾನ

ಮುಂಬೈ: ನೀತಾ ಅಂಬಾನಿ ಅಧ್ಯಕ್ಷರಾಗಿರುವ ರಿಲಯನ್ಸ್ ಪ್ರತಿಷ್ಠಾನ ವತಿಯಿಂದ ವಾರ್ಷಿಕ ಶಿಷ್ಯವೇತನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 2025- 26ನೇ ಶೈಕ್ಷಣಿಕ ವರ್ಷದಲ್ಲಿ ಒಟ್ಟು 5100 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಕ್ಟೋಬರ್ 4 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

5000 ಪದವಿ ವಿದ್ಯಾರ್ಥಿಗಳು ಮತ್ತು 100 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿವರೆಗೆ ಅನುದಾನ ನೀಡಲಾಗುತ್ತದೆ. ಇದು ಶೈಕ್ಷಣಿಕ ಅರ್ಹತೆ ಮತ್ತು ಆರ್ಥಿಕ ಸ್ಥಿತಿಯನ್ನು ಆಧರಿಸಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ನಾತಕೋತ್ತರ ವಿದ್ಯಾರ್ಥಿವೇತನ ಇಂಜಿನಿಯರಿಂಗ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ವಿಭಾಗಗಳಲ್ಲಿ ಅಧ್ಯಯನ ಮಾಡುವ 100 ವಿದ್ಯಾರ್ಥಿಗಳಿಗೆ 6 ಲಕ್ಷ ನೀಡಲಾಗುವುದು. ಜಾಲತಾಣ scholarships.reliance foundation.org ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular