ಸಮಾಜ ಕಲ್ಯಾಣ ಇಲಾಖೆ & ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ಮೆಟ್ರಿಕ್ ಪೂರ್ವ & ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮಗಳಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಮಾಡಲು ಹಾಗೂ ಅರ್ಹ ವಿದ್ಯಾರ್ಥಿಯು ವಿದ್ಯಾರ್ಥಿ ವೇತನದಿಂದ ವಂಚಿತರಾಗದಂತೆ ಮಾಡುವ ಸಂಬAಧ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೋರಿ ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಈ ಕೆಳಕಂಡ ವೆಬ್‌ಸೈಟ್ ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ https://ssp.karnataka.gov.in, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ: https://ssp.postmetric.karnataka.gov.in ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹಾಸನ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.