ಬೆಂಗಳೂರು: ಆಗಸ್ಟ್ 25ರಿಂದ ಸೆಪ್ಟೆಂಬರ್ 7ರವರೆಗೆ “ವಿಶೇಷ ಆಧಾರ್ ಸೀಡಿಂಗ್ ಅಭಿಯಾನ“ ಕಾರ್ಯಕ್ರಮವನ್ನು ಜಿಲ್ಲೆ / ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ /ಪ್ರೋತ್ಸಾಹಧನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸೀಡಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸಲು ಆಗಸ್ಟ್ 25, 2025 ರಿಂದ ಸೆಪ್ಟೆಂಬರ್ 07,2025ರವರೆಗೆ “ವಿಶೇಷ ಆಧಾರ್ ಸೀಡಿಂಗ್ ಅಭಿಯಾನ“ ಕಾರ್ಯಕ್ರಮವನ್ನು ಜಿಲ್ಲೆ / ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಅಭಿಯಾನವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ: 080-22240449, 9480843019. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು. ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 080-29535045, 9480843049. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್, ಬಸ್ಟಾಂಡ್ ಹಿಂಭಾಗ, ಬೆಂಗಳೂರು, ದೂರವಾಣಿ ಸಂಖ್ಯೆ:080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.