ಸೆಕೆಂಡ್ ಪಿಯುಸಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅವಕಾಶ ಬಳಕೆಗೆ ಸಿಎಂ ಸಲಹೆ

ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ ಉತ್ತೀರ್ಣರಾದ ಎಲ್ಲಾ 60,692 ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ.

ಫಲಿತಾಂಶದ ಸುಧಾರಣೆ ಬಯಸಿ ಮತ್ತೊಮ್ಮೆ ಪರೀಕ್ಷೆ ಎದುರಿಸಿದ್ದ 41,719 ವಿದ್ಯಾರ್ಥಿಗಳು ಕಳೆದ ಬಾರಿಗಿಂತ ಹೆಚ್ಚು ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ನಿಮ್ಮೆಲ್ಲರ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಿರಲಿ ಎಂದು ಹಾರೈಸಿದ್ದಾರೆ.

ಹಿಂದಿನ ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವ ಅಗತ್ಯವಿಲ್ಲ. ಯಾವುದೇ ಶುಲ್ಕವಿಲ್ಲದೆ ಪರೀಕ್ಷೆ -3 ಅನ್ನು ಬರೆದು ಉತ್ತೀರ್ಣರಾಗುವ ಅವಕಾಶವನ್ನು ಸರ್ಕಾರ ನಿಮಗೆ ಒದಗಿಸಿಕೊಟ್ಟಿದೆ. ಇದರ ಸದುಪಯೋಗ ಪಡೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read