ವಿಕಲಚೇತನ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ವಿಕಲಚೇತನರಿಗೆ ಎಸ್ಎಸ್ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.

ಜಿಲ್ಲೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿಕಲಚೇತನ ವಿದ್ಯಾರ್ಥಿsಗಳು ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ URL for Fresh application: https://ssp.postmatric.karnataka.gov.in/2324_sa/signin.aspx URL for Renewal application: https://ssp.postmatric.karnataka.gov.in/CA/ ನಲ್ಲಿ ಆನ್ಲೈನ್ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ. ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ಅಗತ್ಯ ದೃಢೀಕೃತ ದಾಖಲಾತಿಗಳೊಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲ್ಯೂ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲ್ಯೂ ಹಾಗೂ ತಾಲ್ಲೂಕು ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲ್ಯೂಗಳಲ್ಲಿ ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ರ್ಯಕರ್ತರಿಗೆ (ಎಂ.ಆರ್.ಡಬ್ಲ್ಯೂ ಗಳಿಗೂ) ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಎಂಆರ್ಡಬ್ಲ್ಯೂ ಬಳ್ಳಾರಿ-8880875620, ಕಂಪ್ಲಿ-7676038917, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಇವರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read