ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ, ಪರೀಕ್ಷಾ ಕೇಂದ್ರಗಳಿಂದ ವಾಸ ಸ್ಥಳಗಳಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬಸ್ ನಿರ್ವಾಹಕರಿಗೆ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂತಿರುಗುವಾಗ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಲಾಗಿದೆ.

