ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಮೈಸೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು,ಶೀಘ್ರವೇ 13,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವೇ ನ್ಯಾಯಲಯದ ತೀರ್ಪು ಹೊರಬೀಳಲಿದ್ದು, 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲಾಗುವುದು. ರಾಜ್ಯಾದ್ಯಂತ 2 ಸಾವಿರ ಕೆಪಿಎಸ್ ಶಾಲೆ ಆರಂಭಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ 600 ಶಾಲೆ ತೆರೆಯಲಾಗುವುದು ಎಂದರು.

ಮಕ್ಕಳಿಗೆ ಪುಸ್ತಕ ಹೊರೆ ಕಡಿಮೆ ಮಾಡುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಪುಸ್ತಕದ ಹೊರೆ ಕಡಿಮೆ ಮಾಡುವ ಮಾರ್ಗ ಕಂಡುಕೊಡ್ಡಿದ್ದೇವೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read