HomeLatest Newsಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ: 4 ಸಾವಿರ ಬೋಧಕರಿಗೆ ಬಡ್ತಿ

ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ: 4 ಸಾವಿರ ಬೋಧಕರಿಗೆ ಬಡ್ತಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು, ಪದವೀಧರ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಬಡ್ತಿ ನೀಡಲು ತೀರ್ಮಾನಿಸಲಾಗಿದ್ದು, ಇದರಿಂದ 4 ಸಾವಿರ ಬೋಧಕರಿಗೆ ಬಡ್ತಿ ಸಿಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

2017ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಒಂದರಿಂದ ಐದನೇ ತರಗತಿಗೆ ಮಾತ್ರ ಪಾಠ ಮಾಡಬೇಕು. ಪದವೀಧರ ಶಿಕ್ಷಕರು 7ನೇ ತರಗತಿವರೆಗೆ ಪಾಠ ಮಾಡಬೇಕು ಎಂಬ ನಿಯಮ ತಂದಿದ್ದರಿಂದ ಸಮಸ್ಯೆಯಾಗಿ ಬಡ್ತಿ ವಿಚಾರಗಳಿಗೆ ತಡೆಯಾಗಿತ್ತು. ಶಿಕ್ಷಕರು ನ್ಯಾಯಾಲಯಕ್ಕೆ ಹೋಗಿದ್ದರು. 2017ರ ಹಿಂದೆ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರು 7ನೇ ತರಗತಿಯವರೆಗೆ ಪಾಠ ಮಾಡಬಹುದು ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದರು.

ನ್ಯಾಯಾಲಯದ ನಿರ್ದೇಶನದಂತೆ ಶಿಕ್ಷಕರಿಗೆ ಅನುಕೂಲವಾಗುವ ರೀತಿ ಬಡ್ತಿ ನೀಡಲು ತೀರ್ಮಾನಿಸಲಾಗಿದೆ. ಸೇವಾ ಜೇಷ್ಠತೆಯ ಅನುಸಾರ ಒಂದು ಅನುಪಾತ ನಿರ್ದಿಷ್ಟಪಡಿಸಿ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಯವರೆಗೆ, ಪಿಯು ಉಪನ್ಯಾಸಕರಿಗೆ ಪ್ರಾಂಶುಪಾಲ ಹುದ್ದೆಗೆ ಬಡ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular