HomeJobsಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಧಿಕೃತ ಆದೇಶ

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: 2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-115 ರಲ್ಲಿನ ಘೋಷಣೆಯಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಲಾಗಿದೆ.

2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳನ್ನು ಭರ್ತಿ ಮಾಡಲು ಮಂಜೂರಾಗಿರುವ ಶೇ 80 ರಷ್ಟು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗದ ಪ್ರಾಥಮಿಕ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕವಿರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಂಜೂರಾತಿ ನೀಡುವ ಕುರಿತು ವಿವಿಧ ವರ್ಗದ ಶಿಕ್ಷಕರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-115ರ ಘೋಷಣೆಯಂತೆ ಹಾಗೂ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ತೀರ್ಮಾನಿಸಿದೆ. ಅದರಂತೆ ಈ ಕೆಳಕಂಡ ಆದೇಶ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ಈ ಕೆಳಕಂಡಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಹುದ್ದೆಗಳ ವಿವರ

ಪದವೀಧರ ಪ್ರಾಥಮಿಕ ಶಿಕ್ಷಕರು – 3,228 ಹುದ್ದೆಗಳು

ಸಹ ಶಿಕ್ಷಕರು -2,214 ಹುದ್ದೆಗಳು

ಪ್ರಾಥಮಿಕ ಶಾಲಾ ಶಿಕ್ಷಕರು – 800 ಹುದ್ದೆಗಳು

ದೈಹಿಕ ಶಿಕ್ಷಣ ಶಿಕ್ಷಕರು -425 ಹುದ್ದೆಗಳು

ಗಣಕ ವಿಜ್ಞಾನ ಶಿಕ್ಷಕರು – 300 ಹುದ್ದೆಗಳು

ಕಲ್ಯಾಣ ಕರ್ನಾಟಕ ಹೊರತುಪಡಿಸಿದ ಹುದ್ದೆಗಳ ವಿವರ

ಪದವೀಧರ ಪ್ರಾಥಮಿಕ ಶಿಕ್ಷಕರು -5,272 ಹುದ್ದೆಗಳು

ಸಹ ಶಿಕ್ಷಕರು -2,286 ಹುದ್ದೆಗಳು

ಪ್ರಾಥಮಿಕ ಶಾಲಾ ಶಿಕ್ಷಕರು -100 ಹುದ್ದೆಗಳು

ದೈಹಿಕ ಶಿಕ್ಷಣ ಶಿಕ್ಷಕರು -175 ಹುದ್ದೆಗಳು

ಗಣಕ ವಿಜ್ಞಾನ ಶಿಕ್ಷಕರು -200 ಹುದ್ದೆಗಳು

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular