HomeLatest Newsಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಚಾಲನೆ

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಚಾಲನೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಹೊಸ ನೇಮಕಾತಿ ನಿಯಮಗಳ ಕರಡು ಅಧಿಸೂಚನೆ ಪ್ರಕಟಿಸಿದ್ದು, ಈ ಮೂಲಕ 15 ಸಾವಿರ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಿದೆ.

ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸರ್ಕಾರದಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದಕ್ಕಾಗಿ ಕರ್ನಾಟಕ ಶಿಕ್ಷಣ ಸೇವೆಗಳು(ಸಾರ್ವಜನಿಕ ಶಿಕ್ಷಣ ಇಲಾಖೆ), (ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ), (ವಿಶೇಷ ನಿಯಮಗಳು 2026) ಪ್ರಕಟಿಸಲಾಗಿದೆ.

ಈ ಕರಡು ಅಧಿಸೂಚನೆಯಂತೆ ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ ಐ ಮತ್ತು ಐಐ, ಗಣಕ ವಿಜ್ಞಾನ ಶಿಕ್ಷಕರು(ಹೊಸ ವೃಂದ) ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನೇಮಕಾತಿ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ನೇತೃತ್ವದಲ್ಲಿ 16 ಸದಸ್ಯರ ಪರೀಕ್ಷಾ ಪ್ರಾಧಿಕಾರ ರಚಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವುದು. ಉಳಿದಂತೆ ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ ಮತ್ತು ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ವೇಟೇಜ್ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular