HomeLatest Newsಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 18 ಸಾವಿರ ಶಿಕ್ಷಕರ ನೇಮಕಾತಿ, ಅಡುಗೆ ಸಿಬ್ಬಂದಿ ಗೌರವಧನ...

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 18 ಸಾವಿರ ಶಿಕ್ಷಕರ ನೇಮಕಾತಿ, ಅಡುಗೆ ಸಿಬ್ಬಂದಿ ಗೌರವಧನ ಹೆಚ್ಚಳ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಮುಂದಿನ ವರ್ಷದಿಂದ ನೈತಿಕ ಶಿಕ್ಷಣವನ್ನು ಪ್ರತ್ಯೇಕ ವಿಷಯವಾಗಿ ಪರಿಚಯಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಸರ್ಕಾರ 18000 ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಪಿಎಸ್ ಶಾಲೆಗಳ ಸಂಖ್ಯೆಯನ್ನು 800 ಕ್ಕೆ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಶಾಲೆಗಳ ಸಂಖ್ಯೆಯನ್ನು 1 ಸಾವಿರದಿಂದ 4ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಶಾಲಾ ಮಕ್ಕಳಿಗೆ ವಾರದ ಎಲ್ಲಾ ದಿನಗಳಂದು ಮೊಟ್ಟೆ ನೀಡಲಾಗುತ್ತಿದೆ. 50 ಪಿಯು ಕಾಲೇಜು, ಪ್ರೌಢಶಾಲೆಗಳಿಗೆ ಅನುಮೋದನೆ ನೀಡಲಾಗಿದ್ದು, ಅಡುಗೆ ಸಿಬ್ಬಂದಿ ಗೌರವಧನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular